ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಜಮ್ಮು-ಕಾಶ್ಮೀರ: ಉಧಂಪುರ ಎನ್ ಕೌಂಟರ್, ಉಗ್ರರೊಂದಿಗೆ ಗುಂಡಿನ ಚಕಮಕಿ, ಸೇನಾ ಯೋಧ ಹುತಾತ್ಮ!

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ. ಅವರ ಅದಮ್ಯ ಧೈರ್ಯ ಮತ್ತು ಶೌರ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದು ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ.

ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಇದಾಗಿದೆ.

ಉದ್ಧಂಪುರದ ದುಡಿ ಬಸಂತ್‌ಗಢ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಂಕಿತರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾಯಿಸುತ್ತಿದ್ದಂತೆಯೇ, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು, ಎನ್ ಕೌಂಟರ್ ಆರಂಭವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ ಇಂದು ಉದ್ಧಂಪುರದ ಬಸಂತ್‌ಗಢ ಪ್ರದೇಶದಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ” ಎಂದು ವೈಟ್ ನೈಟ್ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದೆ.

ಗುಂಡಿನ ಚಕಮಕಿಯಲ್ಲಿ ಆರಂಭದಲ್ಲಿ ಗಂಭೀರವಾಗಿ ಗಾಯಗೊಂಡ ನಮ್ಮ ಯೋಧರೊಬ್ಬರಿಗೆ ಉತ್ತಮ ವೈದ್ಯಕೀಯ ನೆರವು ನೀಡಲಾಯಿತು. ಆದಾಗ್ಯೂ, ಅವರು ಹುತಾತ್ಮರಾದರು ಎಂದು ಸೇನೆ ಮಾಹಿತಿ ನೀಡಿದೆ.

ನಿನ್ನೆ ಸಂಜೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ಮತ್ತೊಂದು ಎನ್ ಕೌಂಟರ್ ನಡೆದಿದ್ದು, ಉರಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಸೈನಿಕರು ವಿಫಲಗೊಳಿಸಿದ್ದು, ಇಬ್ಬರು ಉಗ್ರರು ಹತರಾಗಿದ್ದಾರೆ.

No Comments

Leave A Comment