ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಜಮ್ಮು-ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗಿಸಿದ್ದು, ನಾಶಪಡಿಸಲು ಹತಾಶ ಯತ್ನ ನಡೆಸುತ್ತಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಇದರಿಂದಾಗಿ ನಾಶಪಡಿಸಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾನುವಾರ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿಯನ್ನು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿಯವರು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಇದೇ ವೇಳೆ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಗುತ್ತೆ, ಉಗ್ರರಿಗೆ ಕಠಿಣ ಶಿಕ್ಷೆ ಕೊಟ್ಟೇ ಕೊಡುತ್ತೇವೆಂದು ಭರವಸೆ ನೀಡಿದಿದ್ದಾರೆ.

No Comments

Leave A Comment