ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮಂಡ್ಯ: ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿತ: ಓರ್ವ ಸಾವು, ಹಲವರಿಗೆ ಗಾಯ
ಮಂಡ್ಯ: ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.
ಕಬಡ್ಡಿ ಪಂದ್ಯ ವೀಕ್ಷಿಸಲು ಸ್ಥಳದಲ್ಲಿ ಸಾಕಷ್ಟು ಜನ ನೆರೆದಿದ್ದರು. ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದಿದೆ. ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾನೆಂದು ವರದಿಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.