ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಭಾರತದ ವಿರುದ್ಧ ದ್ವೇಷ, ನಕಲಿ ಸುದ್ದಿ ಪ್ರಸಾರ; ಪಾಕಿಸ್ತಾನದ 15 ಯೂಟ್ಯೂಬ್ ಚಾನೆಲ್’ಗಳು ಬ್ಯಾನ್
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಘಟನೆ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹಳಸಿದ್ದು, ಇದರ ನಡುವಲ್ಲೇ ಭಾರತದ ವಿರುದ್ಧವಾಗಿ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 17 ಯೂಟ್ಯೂಬ್ ಚಾನೆಲ್ ಗಳನ್ನು ಕೇದ್ರ ಸರ್ಕಾರ ಬ್ಲಾಕ್ (ನಿಷೇಧ) ಮಾಡಿದೆ ಎಂದು ತಿಳಿದುಬಂದಿದೆ.
ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಮತ್ತು ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ, ಸುಳ್ಳು ಸುದ್ದಿಗಳನ್ನು ಹರಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಾಕಿಸ್ತಾನದ ಪ್ರಮುಖ ಸುದ್ದಿ ಸಂಸ್ಥೆಗಳು ಮತ್ತು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಸೇರಿದಂತೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ ಎಂದ ಮೂಲಗಳು ತಿಳಿಸಿವೆ.
ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ಜಿಯೋ ನ್ಯೂಸ್, ರಫ್ತಾರ್ ಮತ್ತು ಸುನೋ ನ್ಯೂಸ್‌ನಂತಹ ಪ್ರಮುಖ ಪಾಕಿಸ್ತಾನಿ ಸುದ್ದಿವಾಹಿನಿಗಳನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.
ಇರ್ಷಾದ್ ಭಟ್ಟಿ, ಅಸ್ಮಾ ಶಿರಾಜಿ, ಉಮರ್ ಚೀಮಾ ಮತ್ತು ಮುನೀಬ್ ಫಾರೂಕ್‌ನಂತಹ ಪತ್ರಕರ್ತರು ನಿರ್ವಹಿಸುವ ಯೂಟ್ಯೂಬ್ ಚಾನೆಲ್‌ಗಳನ್ನೂ ಸಹ ಭಾರತೀಯ ಬಳಕೆದಾರರಿಗೆ ನಿರ್ಬಂಧಿಸಲಾಗಿದೆ.
ಇತ್ತೀಚೆಗೆ ಪಹಲ್ಗಾಮ್’ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ಸ್ಥಳೀಯ ಸೇರಿ 26 ಮಂದಿ ಪ್ರವಾಸಿಗರಪು ಸಾವನ್ನಪ್ಪಿದ್ದರು. ಈ ಪೈಶಾಚಿಕ ಘಟನೆ ಬಳಿಕ ಪಾಕಿಸ್ತಾನದ ಈ ಚಾನೆಲ್‌ಗಳು ತಪ್ಪು ಮಾಹಿತಿ ಮತ್ತು ಕೋಮು ಸಂಘರ್ಷವನ್ನು ಉತ್ತೇಜಿಸಲು ವಿಷಯವನ್ನು ಹರಡುತ್ತಿದ್ದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯದ ಶಿಫಾರಸುಗಳ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.