ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮೇ 3ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ
ಬೆಂಗಳೂರು, ಏಪ್ರಿಲ್ 30: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಮೇ 3ರಂದು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಸದ್ಯ ಪರೀಕ್ಷೆ ಬರೆದಿರುವ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದೆ. ಕೆಲ ಸಣಪುಟ್ಟ ಕಾರ್ಯಗಳಿದ್ದು, ಕೂಡಲೇ ಮುಕ್ತಾಯಗೊಳಿಸಿ ಮೇ 3ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.