ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನ
ಉಡುಪಿ, ಮೇ 02: ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆಗಿದೆ. ಇದರ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.
ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಸದ್ಯ ಹಿರಿಯಡಕ ಠಾಣೆ ಪೊಲೀಸರಿಂದ ಇಬ್ಬರನ್ನು ಬಂಧಿಸಲಾಗಿದ್ದು, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆ ಯತ್ನ ಎಂದು ಆರೋಪಿಗಳು ಒಪ್ಪಿಕೊಂಡಿದ್ದಾರೆ.
ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು
ಸುಶಾಂತ್, ಸಂದೇಶ್ ಪೂಜಾರಿ ಬಂಧಿತರು. ನಿನ್ನೆ ರಾತ್ರಿ ಆಟೋ ಚಾಲಕ ಅಬೂಬಕ್ಕರ್ನನ್ನು ಅಡ್ಡಕಟ್ಟಿದ ಸುಶಾಂತ್ ಮತ್ತು ಸಂದೇಶ್ ಪೂಜಾರಿ ತಲ್ವಾರ್, ಬಾಟಲ್ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ದಾಳಿಯಿಂದ ಅಬೂಬ್ಬಕ್ಕರ್ ತಪ್ಪಿಸಿಕೊಂಡು ಹೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿದ್ದಿಷ್ಟು
ತಕ್ಷಣ ಎಚ್ಚೆತ್ತುಕೊಂಡ ಹಿರಿಯಡಕ ಠಾಣೆ ಪೊಲೀಸರು ಸುಶಾಂತ್, ಸಂದೇಶ್ ಪೂಜಾರಿಯನ್ನು ಬಂಧಿಸಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೊಲೆಗೆ ಯತ್ನಿಸಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ಸಂಬಂಧ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿದ್ದಾರೆ.