.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕಾರ: ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ ರಾಜೀನಾಮೆ

ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ ಶುಕ್ರವಾರ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ.

ಯತ್ನಾಳ್ ಅವರು ಇತ್ತೀಚೆಗೆ ಶಿವಾನಂದ ಪಾಟೀಲ ಅವರನ್ನು ಉದ್ದೇಶಿಸಿ, ಅವರು ಪಾಟೀಲರೇ ಅಲ್ಲ, ‘ರಾಜಕೀಯಕ್ಕಾಗಿ ಪಾಟೀಲ’ ಅಂತ ಸರ್‌ನೇಮ್ ಸೇರಿಸಿದ್ದು, ಅಪ್ಪನಿಗೆ ಹುಟ್ಟಿದವ ಆದರೆ ಶುಕ್ರವಾರದೊಳಗೆ ರಾಜೀನಾಮೆ ನೀಡಿ ಚುನಾವಣೆಯಲ್ಲಿ ನನ್ನ ಮುಂದೆ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದರು. ಆ ಸವಾಲು ಸ್ವೀಕರಿಸಿದ ಶಿವಾನಂದ ಪಾಟೀಲ ರಾಜೀನಾಮೆ ನೀಡಿದ್ದಾರೆ. ಬಸನಗೌಡ ಪಾಟೀಲ ರಾಜೀನಾಮೆ ನೀಡಿದ ನಂತರ ತಮ್ಮ ರಾಜೀನಾಮೆ ಸ್ವೀಕರಿಸಬೇಕು ಎಂದು ಶಿವಾನಂದ ಪಾಟೀಲ್ ಷರತ್ತು ಹಾಕಿದ್ದಾರೆ.

ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ದಿಗಾರರ ಜತೆ‌ ಮಾತನಾಡಿ ಶಿವಾನಂದ ಪಾಟೀಲ, ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ಇದು ವೈಯಕ್ತಿಕ ತೀರ್ಮಾನ. ಯತ್ನಾಳ ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.

No Comments

Leave A Comment