ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಸುಹಾಸ್ ಹತ್ಯೆ ಪ್ರಕರಣದಲ್ಲಿ 8ಮಂದಿ ಪೊಲೀಸ್ ವಶಕ್ಕೆ; ಅಣ್ಣನ ಹತ್ಯೆ ಪ್ರತೀಕಾರಕ್ಕೆ ಹಿಂದೂಗಳನ್ನು ಬಳಸಿದನೇ ಫಾಜಿಲ್ ತಮ್ಮ

ಮಂಗಳೂರು, ಮೇ 03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, ಘಟನೆ ಸಂಬಂಧ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದಿದ್ದು  ಬಂಧಿತರ ವಿವರ ನೀಡಿದ್ದಾರೆ.

ಈ ಪೈಕಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಆದರೆ, ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್ ಮಾಡಿದ್ದಾಗಿಯೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಇದರೊಂದಿಗೆ ಅಣ್ಣನ ಹತ್ಯೆ ಪ್ರತೀಕಾರಕ್ಕೆ ಆದಿಲ್ ಹಿಂದೂಗಳನ್ನೂ ಬಳಸಿಕೊಂಡಿರುವುದು ಬಯಲಾದಂತಾಗಿದೆ.

►ಶಾಂತಿಗುಡ್ಡೆ ಪೇಜಾವರ ಗ್ರಾಮದ ನಿವಾಸಿ ಅಬ್ದುಲ್ ನಾಸಿರ್ ಅವರ ಪುತ್ರ ಅಬ್ದುಲ್ ಸಫ್ವಾನ್ (29). ಈತ ಚಾಲಕನಾಗಿ ದುಡಿಯುತ್ತಿದ್ದ.
►ಬಜ್ಪೆ ನಿವಾಸಿ ಅಬೂಬಕ್ಕರ್ ಅವರ ಪುತ್ರ ನಿಯಾಝ್ (28). ಈತ ಮೇಸ್ತ್ರಿ ಹೆಲ್ಪರ್ ಕೆಲಸ ಮಾಡುತ್ತಿದ್ದ.
► ಕೆಂಜಾರು ನಿವಾಸಿ ಅಬ್ದುಲ್ ರಝಾಕ್ ಅವರ ಪುತ್ರ ಮುಹಮ್ಮದ್ ಮುಝಮ್ಮಿಲ್ (32). ಸೌದಿ ಅರೇಬಿಯಾ ದಲ್ಲಿ ಸೇಲ್ಸ್ ಮ್ಯಾನ್ ಕೆಲಸ ಮಾಡುತ್ತಿದ್ದ ಈತ ಕಳೆದ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದಾನೆ.
► ಕಳವಾರು ನಿವಾಸಿ ಮುಹಮ್ಮದ್ ಅವರ ಪುತ್ರ ಕಲಂದರ್ ಶಾಫಿ (31). ಈತ ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್ ಆಗಿ ದುಡಿಯುತ್ತಿದ್ದ.
► ಚಿಕ್ಕಮಗಳೂರಿನ ಕಳಸ ನಿವಾಸಿ ರಾಜೇಶ್ ಅವರ ಪುತ್ರ ರಂಜಿತ್ (19). ಈತ ಚಾಲಕನಾಗಿ ದುಡಿಯುತ್ತಿದ್ದ.
► ಚಿಕ್ಕಮಗಳೂರಿನ ಕಳಸ ನಿವಾಸಿ ಮಾರಿ ಮುತ್ತು ಅವರ ಪುತ್ರ ನಾಗರಾಜ್ (20). ಈತ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ.
► ಜೋಕಟ್ಟೆ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರ ಮುಹಮ್ಮದ್ ರಿಝ್ವಾನ್ (28). ಈತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ.
► ಬಜ್ಪೆ ನಿವಾಸಿ ಆದಿಲ್‌ ಮೆಹರೂಫ್

No Comments

Leave A Comment