ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ನೆಲಮಂಗಲದಲ್ಲಿ KSRTC ಬಸ್- ಆಟೋ ನಡುವೆ ಭೀಕರ ಅಪಘಾತ; ಮೂವರು ದುರ್ಮರಣ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಟ್ಟಿದ್ದಾರೆ. ಇನ್ನು ಮೂವರಿಗೆ ಗಾಯಗಳಾಗಿವೆ. ಹಾಗಾದ್ರೆ ಅಪಘಾತಕ್ಕೆ ಕಾರಣವೇನು? ಮೃತಪಟ್ಟವರು ಯಾರು? ಎಲ್ಲಿಯವರು? ಎಲ್ಲಿಗೆ ಹೋಗುತ್ತಿದ್ದರು ಎನ್ನುವ ವಿವರ ಇಲ್ಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಮೂವರು ಮೃತಪಟ್ಟಿದ್ದಾರೆ. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಭೀಕರ ಅಪಘಾತದಲ್ಲಿ ಆಟೋ ಚಾಲಕ ಶ್ರೀನಿವಾಸ(40), ಪುಟ್ಟಮ್ಮ(55), ವರ್ಷಿಣಿ(13) ಸಾವನ್ನಪ್ಪಿದ್ದಾರೆ.
ಇನ್ನು ಆಟೋದಲ್ಲಿದ್ದ ಲೇಖನ(11) ಸ್ಥಿತಿ ಗಂಭೀರವಾಗಿದ್ದು, ನಾಗರತ್ನಮ್ಮ(35), ವೆಂಕಟೇಶ(37) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಕೆಎಸ್ಆರ್ ಟಿಸಿ ಬಸ್ ಬೆಂಗಳೂರಿನಿಂದ ಹೊರನಾಡಿಗೆ ಸಂಚರಿಸುತ್ತಿದ್ದರೆ, ಆಟೋ ಶಾಂತಿನಗರದಿಂದ ನೆಲಮಂಗಲಕ್ಕೆ ಹೋಗುತ್ತಿತ್ತು. ಸಂಬಂಧಿಕರ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಒಂದೇ ಕುಟುಂಬದ ಆರು ಜನರು ಆಟೋದಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪುಟ್ಟಮ್ಮ 55, ಶ್ರೀನಿವಾಸ್40, (ಆಟೋ ಚಾಲಕ ) ಸ್ಥಳದಲ್ಲೇ ಮೃತಪಟ್ಟಿದ್ದರೆ. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ಪುಟ್ಟಮ್ಮ ಮಗಳು 13 ವರ್ಷದ ವರ್ಷಿಣಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಮತ್ತೋರ್ವ ಪುತ್ರಿ ಲೇಖನ (11) ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾಳೆ.
ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಿ, ಕ್ರೇನ್ ಮೂಲಕ ಆಟೋ ಮತ್ತು ಬಸ್‌ನ್ನು ತೆರವುಗೊಳಿಸಿ ಟ್ರಾಫಿಕ್ ನಿಯಂತ್ರಿಸಲಾಯಿತು. ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೂ, ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಲ್ಲರಬಾಣವಾಡಿ ಕ್ರಾಸ್ ಬಳಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಆಟೋ ಸಂಪೂರ್ಣ ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿದೆ.