ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಪಾಕ್‌ನಿಂದ ಅಂಚೆ, ಪಾರ್ಸೆಲ್‌ಗಳ ವಿನಿಮಯ ಸ್ಥಗಿತಗೊಳಿಸಿದ ಭಾರತ

ನವದೆಹಲಿ: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭಾರತ ಶನಿವಾರ ಪಾಕಿಸ್ತಾನದಿಂದ ವಿಮಾನ ಮತ್ತು ರಸ್ತೆ, ಜಲ ಮಾರ್ಗಗಳ ಮೂಲಕ ಎಲ್ಲಾ ವರ್ಗದ ಅಂಚೆ ಮತ್ತು ಪಾರ್ಸೆಲ್‌ಗಳ ವಿನಿಮಯವನ್ನು ಸ್ಥಗಿತಗೊಳಿಸಿದೆ.

ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಚೆ ಇಲಾಖೆಯು ಸೇವೆಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಹೊರಡಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ “ಪಾಕಿಸ್ತಾನದ” ನಂಟು ಉಲ್ಲೇಖಿಸಿರುವ ಭಾರತ ಪಾಕ್ ವಿರುದ್ಧ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಮತ್ತು ಉಗ್ರರಿ ಕಠಿಣ ಶಿಕ್ಷೆ ವಿಧಿಸುವ ಭರವಸೆ ನೀಡಿದೆ.

ಇನ್ನು ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತ ಸರ್ಕಾರ ನಿಷೇಧಿಸಿದೆ.

No Comments

Leave A Comment