ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಜೈಲಿನಲ್ಲಿರುವ ಜನಾರ್ದನ ರೆಡ್ಡಿಗೆ ಬಿಗ್ ಶಾಕ್, ಶಾಸಕ ಸ್ಥಾನದಿಂದ ಅನರ್ಹ
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು. ಇದರಿಂದ ಹೇಗಾದರೂ ಮಾಡಿ ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್ ಮುಂದೆ ಅಂಗಲಾಚಿ ಬೇಡಿಕೊಂಡಿದ್ದರು. ಆದ್ರೆ, ಕೋರ್ಟ್ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ.
ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.
ಗಂಗಾವತಿ ಕ್ಷೇತ್ರಕ್ಕೆ ಬೈ ಎಲೆಕ್ಷನ್
ಬಳ್ಳಾರಿ ಜಿಲ್ಲೆ ಪ್ರವೇಶಕ್ಕೆ ಕೋರ್ಟ್, ಜನಾರ್ದನ ರೆಡ್ಡಿ ಅನುಮಾತಿ ಕೊಟ್ಟಿರಲಿಲ್ಲ. ಹೀಗಾಗಿ ರೆಡ್ಡಿ ಕೆಆರ್ಎಸ್ ಪಕ್ಷವನ್ನು ಕಟ್ಟಿ ಅದರಿಂದಲೇ ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ತಮ್ಮ ಸಮೀಪ ಸ್ಪರ್ಧಿ ಕಾಂಗ್ರೆಸ್ನ ಇಕ್ಬಾಲ್ ಅನ್ಸಾರಿ ಅವರನ್ನು ಸೋಲಿಸಿ ಮತ್ತೆ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದರು. ಆದರೆ, ಇದೀಗ ರೆಡ್ಡಿ ತಮ್ಮ ಶಾಸಕ ಸ್ಥಾನ ಕಳೆದುಕೊಂಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ.