ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್​ಕೇಸ್​ನಲ್ಲಿ ಶವ ಪತ್ತೆ

ಗುವಾಹಟಿ, ಮೇ 12: ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್​ಕೇಸ್​ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.

ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.

ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಕೊಲೆಯಲ್ಲಿ ಆಕೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯಿಂದ ಬೇರ್ಪಟ್ಟಿರುವ ಮಗುವಿನ ತಂದೆ ಕೂಡ ಪೊಲೀಸರಲ್ಲಿ ಹೇಳಿಕೆ ದಾಖಲಿಸಿದ್ದಾರೆ.

No Comments

Leave A Comment