ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ತಾಯಿಯ ಪ್ರಿಯಕರನಿಂದ ಬಾಲಕನ ಹತ್ಯೆ, ಸೂಟ್‌ಕೇಸ್‌ನಲ್ಲಿ ಶವ ಪತ್ತೆ
ಗುವಾಹಟಿ, ಮೇ 12: ತಾಯಿಯ ಪ್ರಿಯಕರನೇ 10 ವರ್ಷದ ಬಾಲಕನನ್ನು ಕೊಲೆ ಮಾಡಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ಬಾಲಕನನ್ನು ಪೊದೆಯ ಬಳಿಕ ಕೊಂದು ಸೂಟ್‌ಕೇಸ್‌ನಲ್ಲಿ ಮುಚ್ಚಿಟ್ಟಿದ್ದ ಎನ್ನಲಾಗಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.
ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.
ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಕೊಲೆಯಲ್ಲಿ ಆಕೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯಿಂದ ಬೇರ್ಪಟ್ಟಿರುವ ಮಗುವಿನ ತಂದೆ ಕೂಡ ಪೊಲೀಸರಲ್ಲಿ ಹೇಳಿಕೆ ದಾಖಲಿಸಿದ್ದಾರೆ.