ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್‌ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಛತ್ತೀಸ್ಗಢದಲ್ಲಿ ಭೀಕರ ರಸ್ತೆ ಅಪಘಾತ, 13 ಮಂದಿ ಸಾವು, 11 ಜನರಿಗೆ ಗಾಯ
ರಾಯ್‌ಪುರ, ಮೇ 12: ಛತ್ತೀಸ್ಗಢದ ರಾಯ್ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ.
ರಾಯ್‌ಪುರ ಎಸ್‌ಪಿ ಲಾಲ್ ಉಮ್ಮದ್ ಸಿಂಗ್ ಮಾತನಾಡಿ, ಚೌಥಿಯಾ ಛಟ್ಟಿಯಿಂದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಲಾರಿಯಲ್ಲಿ ಹಿಂತಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು.
ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಲಾರಿ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸ್ ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಗಾಯಾಳುಗಳನ್ನು ರಾಯ್‌ಪುರದ ಡಾ. ಭೀಮರಾವ್ ಅಂಬೇಡ್ಕರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾಯ್‌ಪುರ ಜಿಲ್ಲಾಧಿಕಾರಿ ಗೌರವ್ ಸಿಂಗ್ ಅವರು ಜಿಲ್ಲಾಡಳಿತದ ಅಧಿಕಾರಿಗಳು ಕೂಡ ಸ್ಥಳಕ್ಕೆ ತಲುಪಿದ್ದಾರೆ.
ಅಪಘಾತದಲ್ಲಿ ಹದಿಮೂರು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.