ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿ: ಹೃದಯಾಘಾತ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಇನ್ನಿಲ್ಲ
ಉಡುಪಿ:ಮೇ. 12. ಕರ್ನಾಟಕದ ಮನೆ ಮಾತಾಗಿದ್ದ ‘ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ(34) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ರಾಕೇಶ್ ಅವರು ಕಾರ್ಕಳದ ನಿಟ್ಟೆಯಲ್ಲಿರು ಸ್ನೇಹಿತನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ 12 ಮುಂಜಾನೆ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ.
ಇನ್ನು ರಾಕೇಶ್ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ರಾಕೇಶ್ ಅವರನ್ನು ಸ್ನೇಹಿತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಆಸ್ಪತ್ರೆಗೆ ತೆರಳುವಾಗ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸದ್ಯ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವ, ಕುಸಿದು ಬೀಳುವ ಮುನ್ನದ, ಕೊನೆ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ರಾಕೇಶ್ ನಿಧನಕ್ಕೆ ನಟಿ ರಕ್ಷಿತಾ ಪ್ರೇಮ್, ನಟರೂ ಹಾಗೂ ರಾಕೇಶ್ ಆಪ್ತರೂ ಆದ ಶಿವರಾಜ್ ಕೆಆರ್ ಪೇಟೆ, ಗೋವಿಂದೇ ಗೌಡ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
ರಾಕೇಶ್ ಅವರು ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಅವರು ಕನ್ನಡದ ‘ಪೈಲ್ವಾನ್’, ‘ಇದು ಎಂತ ಲೋಕವಯ್ಯ’ ಸಿನಿಮಾಗಳಲ್ಲಿ, ಹಾಗೂ ತುಳುವಿನ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’, ‘ಪಮ್ಮನ್ನೆ ದಿ ಗ್ರೇಟ್’, ‘ಉಮಿಲ್’ ಮತ್ತು ‘ಇಲ್ಲೊಕ್ಕೆಲ್’ ನಾಟಕಗಳು, ಪ್ರಹಸನಗಳಲ್ಲಿ ನಟಿಸಿ ಜನಪ್ರಿಯರಾಗಿದ್ದರು.