ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

ಮಂಗಳೂರು: ಮೇ 19: ದಕ್ಷಿಣ ಕನ್ನಡ  ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಏರೋನಾಟಿಕ್ಸ್ ಇಂಜಿನಿಯರ್ ನಿಗೂಢ ಸಾವು ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಯುವತಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಆಕಾಂಕ್ಷಾ ಎಸ್ ನಾಯರ್ (22) ಮೃತ ದುರ್ದೈವಿ.

ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್ ನಾಯರ್ ಅವರು, ಶನಿವಾರ (ಮೇ.17) ರಂದು ಪಂಜಾಬ್​ನ ಪಗ್ವಾರದ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಆಕಾಂಕ್ಷಾ ಅವರು ಇದೇ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಎಂಬುವರನ್ನು ಪ್ರೀತಿಸುತ್ತಿದ್ದರು. ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ ಕೇರಳದ ಕೊಟ್ಟಾಯಂ ನಿವಾಸಿಯಾಗಿದ್ದು, ಎರಡು ಮಕ್ಕಳ ತಂದೆಯಾಗಿದ್ದಾರೆ. ಆಕಾಂಕ್ಷಾ ಪ್ರಾಧ್ಯಾಪಕ ಮ್ಯಾಥ್ಯೂ ಜೊತೆ ಅವರ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಜಗಳ ಮಾಡಿದ್ದರು.

No Comments

Leave A Comment