ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ರಾಯರ ದರ್ಶನ ಪಡೆದು ವಾಪಸ್ ಬರುವಾಗ ಅಪಘಾತ: ಬಿಜೆಪಿ ಮುಖಂಡ ಸೇರಿ ಮೂವರ ಸಾವು
ತುಮಕೂರು:ಮೇ 19: ಆಂಧ್ರದ ಕರ್ನೂಲ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬಿಜೆಪಿಯ (BJP) ಮಾಜಿ ತಾಲೂಕು ಅಧ್ಯಕ್ಷ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಿಕ್ಕನಾಯಕನಹಳ್ಳಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ನವೀನ್ (48), ಬಿಜೆಪಿ ಮುಖಂಡ ಸಂತೋಷ್(35), ಲೋಕೇಶ್(38) ಮೃತ ದುರ್ದೈವಿಗಳು. ಮತ್ತು ಮೂವರಿಗೆ ಗಂಭೀರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ನಿವಾಸಿಗಳು ಎಂದು ತಿಳಿದುಬಂದಿದೆ. ನವೀನ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಆರೂ ಜನ ಇನೋವಾ ಕಾರಿನಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ.