ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಜಮ್ಮು- ಕಾಶ್ಮೀರ: ಶೋಪಿಯಾನ್‌ನಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶ

ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಡಿಕೆ ಪೋರಾ ಪ್ರದೇಶದಲ್ಲಿ ಭಾರತೀಯ ಸೇನೆಯ 34 ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಗುಂಪು (SOG)ಮತ್ತು CRPF 178 ಬೆಟಾಲಿಯನ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ.

ಬಂಧಿತರಿಂದ ಎರಡು ಪಿಸ್ತೂಲ್‌ಗಳು, ನಾಲ್ಕು ಗ್ರೆನೇಡ್‌ಗಳು, 43 ಸುತ್ತಿನ ಮದ್ದು ಗುಂಡುಗಳು ಮತ್ತಿತರ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಶೋಪಿಯಾನ್ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಉಗ್ರರ ಸಹಚರರ ಸಂಪರ್ಕಗಳು ಮತ್ತು ಚಟುವಟಿಕೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ತನಿಖೆ ನಡೆಸುತ್ತಿದ್ದಾರೆ.

ಉಗ್ರರ ಸಹಚರರ ಬಂಧನ ಈ ಭಾಗದಲ್ಲಿ ಕಾನೂನುಬಾಹಿರ ಮತ್ತು ವಿಧ್ವಂಸಕ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ಮೈಲಿಗಲ್ಲು ಎನ್ನಲಾಗುತ್ತಿದೆ. ರಾಷ್ಟ್ರೀಯ ಭದ್ರತೆಗೆ ಬೆದರಿಕೆ ತಟಸ್ಥಗೊಳಿಸಲು ಮತ್ತು ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಶೋಪಿಯಾನ್ ಪೊಲೀಸರ ದಕ್ಷತೆಯನ್ನು ತೋರಿಸುತ್ತಿದೆ.

ಮೇ 13 ರಂದು, ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲರ್‌ನ ಶುಕ್ರೂ ಅರಣ್ಯ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಗೆ ಸಂಬಂಧಿಸಿದ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಆದರೆ ಆದರೆ, ಹತರಾದ ಉಗ್ರರ ಗುರುತು ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

No Comments

Leave A Comment