ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ಇದು ಪ್ರತೀಕಾರವಲ್ಲ, ನ್ಯಾಯ..ಅವರ ಪೀಳಿಗೆ ನೆನಪಿಡುವಂತೆ ಪಾಠ ಕಲಿಸಿದ್ದೇವೆ: ಪಾಕ್ ಉಗ್ರ ನೆಲೆ ಧ್ವಂಸದ ಮತ್ತೊಂದು ವೀಡಿಯೋ ಬಿಡುಗಡೆ ಮಾಡಿದ ಸೇನೆ
ನವದೆಹಲಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹೊಸ ವಿಡಿಯೋವೊಂದನ್ನು ಭಾರತೀಯ ಸೇನೆಪಡೆ ಬಿಡುಗಡೆ ಮಾಡಿದ್ದು, ಇದು ಪ್ರತೀಕಾರವಲ್ಲ, ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಒದಗಿಸಲಾಗಿದೆ ಎಂ ಸಂದೇಶವನ್ನು ಈ ಮೂಲಕ ನೀಡಿದೆ.
ಗಡಿಯಲ್ಲಿರುವ ಪಾಕಿಸ್ತಾನದ ಔಟ್‌ಪೋಸ್ಟ್ ಗಳನ್ನು ಶೆಲ್ ದಾಳಿ ಮೂಲಕ ನಾಶಮಾಡುವ ವಿಡಿಯೋವೊಂದನ್ನು ಭಾರತೀಯ ಸೇನೆಯ ಪಶ್ಚಿಮ ಕಮಾಂಡ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದೆ.
‘ಯೋಜನೆ ಹಾಕಿ, ತರಬೇತಿಪಡೆದು, ಕಾರ್ಯಗತಗೊಳಿಸಲಾಗಿದೆ, ನ್ಯಾಯ ಒದಗಿಸಲಾಗಿದೆ ಎಂದು ವಿಡಿಯೋಗೆ ಟಿಪ್ಪಣಿ ಬರೆದು ಕೊಂಡಿದೆ.
ಸೇನಾ ಸಿಬ್ಬಂದಿಯೊಬ್ಬರು ಮಾತನಾಡಿ, ಇದೆಲ್ಲ ಆರಂಭವಾಗಿದ್ದು ಪಹಲ್ಗಾಮ್ ಉಗ್ರ ದಾಳಿಯಿಂದ. ಈ ಬಗ್ಗೆ ದೇಶಾದ್ಯಂತ ಭಾರೀ ಆಕ್ರೋಶವ್ಯಕ್ತವಾಗಿತ್ತು. ಆಗ ಎಲ್ಲರ ಮನಸ್ಸಿನ ಭಾವನೆ ಒಂದೇ ಆಗಿತ್ತು. ಬಾರಿ ಪಾಕಿಸ್ತಾನವು ತಲೆಮಾರುಗಳವರೆಗೆ ನೆನಪಿಟ್ಟುಕೊಳ್ಳುವಂಥ ಪಾಠ ಕಲಿಸಬೇಕೆಂದು. ಇದು ಪ್ರತೀಕಾರ ಅಲ್ಲ, ನ್ಯಾಯ.
ಮೇ 9ರ ರಾತ್ರಿ ಸುಮಾರು 9 ಗಂಟೆ ಸುಮಾರಿಗೆ ಪಾಕಿಸ್ತಾನದ ಯಾವೆಲ್ಲ ಪೋಸ್ಟ್ ಕದನ ವಿರಾಮ ಉಲ್ಲಂಘಿಸಿತೋ ಅವನ್ನೆಲ್ಲ ಭಾರತೀಯ ಸೇನೆ ಸಂಪೂರ್ಣವಾಗಿ ನಾಶ ಮಾಡಿತು. ಆಪರೇಷನ್ ಸಿಂಧೂರ ಕೇವಲ ಒಂದು ಕಾರ್ಯಾಚರಣೆಯಲ್ಲ. ದಶಕಗಳಾದರೂ ಬುದ್ಧಿಕಲಿಯದ ಪಾಕಿಸ್ತಾನಕ್ಕೆ ಕಲಿಸಿದ ಪಾಠ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಕಳೆದ ಏಪ್ರಿಲ್ 22ರಂದು ಕಾಶ್ಮೀರದ ಪೆಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಪಾಕ್ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು.
ದಾಳಿಯಲ್ಲಿ ಪಾಕ್ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿತ್ತು. ಭಾರತ ನಡೆಸಿದ ವಾಯುದಾಳಿಯಲ್ಲಿ 100 ಉಗ್ರರನ್ನು ಹತ್ಯೆ ಮಾಡಲಾಗಿತ್ತು.
ಇದೀಗ ಉಗ್ರ ಪೋಷಕ ಪಾಕ್ ವಿರುದ್ಧ ಜಾಗತೀಕ ಮಟ್ಟದಲ್ಲಿ ಅದರ ಮುಖವಾಡ ಕಳಚಲು ಯೋಜನೆ ರೂಪಿಸಿದೆ. ಇದಕ್ಕಾಗಿ ವಿದೇಶಗಳಿಗೆ ಕೇಂದ್ರ ಸರ್ಕಾರ ಸಂಸದ ಶಶಿ ತರೂರ್ ನೇತೃತ್ವದ ಸರ್ವ ಪಕ್ಷಗಳ ನಿಯೋಗವನ್ನು ಕಳುಹಿಸಲು ಮುಂದಾಗಿದೆ.