ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ಉಡುಪಿ ಎಸ್‌ಪಿ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’-ಮೇ 21ರಂದು ಪ್ರದಾನ
ಉಡುಪಿ:ಮೇ. 19,ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನೀಡಲಾಗುತ್ತಿರುವ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಕುಮಾರ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ.
ಮಲ್ಪೆ ಕರಾವಳಿ ಕಾವಲು ಪೊಲೀಸ್‌ನ ಎಸ್‌ಐ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಗುರುದಾಸ್ ಮತ್ತು ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್ ಕೂಡ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪದಕಗಳನ್ನು ಅಧಿಕೃತವಾಗಿ ಪ್ರದಾನ ಮಾಡಲಾಗುವುದು.