ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ಗೋಲ್ಡ್ ಸ್ಮಗ್ಲಿಂಗ್ ಕೇಸ್ : ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು

ಬೆಂಗಳೂರು:ಮೇ.20 ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರನ್ಯಾರಾವ್‌ಗೆ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ 2ನೇ ಆರೋಪಿ ತರುಣ್‌ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್‌ ಆದೇಶಿಸಿದೆ.

ಡಿಆರ್‌ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಬ್ಬರು ಶ್ಯೂರಿಟಿ, 2 ಲಕ್ಷ ರೂ. ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ಅಲ್ಲದೇ ಇಂತಹ ಕೃತ್ಯಗಳಲ್ಲಿ ಭಾಗಿಯಾದಂತೆ ಹಾಗೂ ದೇಶ ಬಿಟ್ಟು ಹೊರಗೆ ಹೋಗದಂತೆ ಸೂಚನೆ ನೀಡಿದೆ.

12 ಕೋಟಿ ರೂ. ಮೌಲ್ಯದ 14 ಕೆ.ಜಿ ಚಿನ್ನದ ಗಟ್ಟಿಗಳನ್ನು ದುಬೈನಿಂದ ಬೆಂಗಳೂರಿಗೆ ತಂದು ನಟಿ ರನ್ಯಾ ರಾವ್‌ ಬಂಧನಕ್ಕೆ ಒಳಗಾಗಿದ್ದರು.

kiniudupi@rediffmail.com

No Comments

Leave A Comment