ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ಆನೇಕಲ್: ಸೂಟ್ಕೇಸ್ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆ
ಆನೇಕಲ್, ಮೇ 21: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್ಕೇಸ್ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್ಕೇಸ್ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಬಾಲಕಿ ಮೃತಪಟ್ಟ ಬಳಿಕ ಇಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ