ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್, ಪವಿತ್ರಾಗೆ ತಾತ್ಕಾಲಿಕ 2 ತಿಂಗಳು ರಿಲೀಫ್ ನೀಡಿದ ಸುಪ್ರೀಂ

ನವದೆಹಲಿ:ಮೇ. 21,ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಸದಸ್ಯರಿಗೆ ಸುಪ್ರೀಂ ಕೋರ್ಟ್ 2 ತಿಂಗಳು ರಿಲೀಫ್ ನೀಡಿದೆ.

ದರ್ಶನ್, ಪವಿತ್ರಾ ಸೇರಿದಂತೆ 17 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ದೊರೆತಿತ್ತು. ವಿಚಾರಣೆ ವೇಳೆ ಕೋರ್ಟ್​ಗೆ ಹಾಜರಿ ಹಾಕಬೇಕು ಎಂಬುದು ಕೋರ್ಟ್‌ನ ಷರತ್ತುಗಳಲ್ಲಿ ಒಂದು. ಈ ಷರತ್ತನ್ನು ಅವರು ಪಾಲಿಸುತ್ತಾ ಇದ್ದಾರೆ. ಈ ಮಧ್ಯೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ, ದರ್ಶನ್ ಅವರ ಜಾಮೀನು ರದ್ದು ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸರು ಸುಪ್ರೀಂಕೋರ್ಟ್​ಗೆ ಮನವಿ ಮಾಡಿದ್ದರು.

ಪೊಲೀಸರು ಸಲ್ಲಿಸಿರುವ ಮೇಲ್ಮನವಿಯ ಅರ್ಜಿಯ ವಿಚಾರಣೆ ಬುಧವಾರ ಸುಪ್ರೀಂ ಕೋರ್ಟ್‌ನ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಪೀಠದಲ್ಲಿ ನಡೆಯಿತು. ಈ ವೇಳೆ ಸುಪ್ರೀಂಕೋರ್ಟ್​ಗೆ ಬೇಸಿಗೆ ರಜೆ ಇದೆ. ಜುಲೈ 14ಕ್ಕೆ ಬೇಸಿಗೆ ರಜೆ ಅಂತ್ಯವಾಗಲಿದೆ. ಇದಾದ ಬಳಿಕ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಹೀಗಾಗಿ ಅಲ್ಲಿಯವರೆಗೆ ದರ್ಶನ್ ಮತ್ತು ಇತರ ಆರೋಪಿಗಳಿಗೆ ರಿಲೀಫ್ ಸಿಕ್ಕಂತಾಗಿದೆ. ವಿಚಾರಣೆ ದಿನಾಂಕ ಮುಂದಿನ ದಿನಗಳಲ್ಲಿ ಪ್ರಕಟವಾಗಲಿದೆ.

2024ರ ಡಿ.13ರಂದು ಹೈಕೋರ್ಟ್ ಏಕಸದಸ್ಯ ಪೀಠ ದರ್ಶನ್, ಪವಿತ್ರಗೌಡ ಸೇರಿದಂತೆ ಏಳು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

kiniudupi@rediffmail.com

No Comments

Leave A Comment