ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ದೇವನಹಳ್ಳಿ: ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: 31 ಮಂದಿ ವಶಕ್ಕೆ
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಕನ್ನಮಂಗಲ ಗೇಟ್ ಬಳಿಯ ಫಾರ್ಮ್ ಹೌಸ್ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು ಬೆಳಗಿನ ಜಾವ 5 ಗಂಟೆಯಲ್ಲಿ ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬರ ಜನ್ಮ ದಿನದ ಅಂಗವಾಗಿ ಪಾರ್ಟಿ ಆಯೋಜನೆ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ದೇವನಹಳ್ಳಿ ಎಸಿಪಿ ನವೀನ್ ನೇತೃತ್ವದ ತಂಡ ದಾಳಿ ನಡೆಸಿ, ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಯುವಕ, ಯುವತಿಯರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದೆ.
ಮಾದಕ ವಸ್ತುಗಳನ್ನು ಬಳಕೆ ಮಾಡಿರುವುದು ಕಂಡು ಬಂದಿದೆ. 24 ಯುವಕರು, 7 ಯುವತಿಯರು ಸೇರಿದಂತೆ ಒಟ್ಟು 31 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್ ಹಾಗೂ ಮಾದಕ ವಸ್ತು ಸೇವನೆ ಮಾಡುವವರು ಭಾಗವಹಿಸಿದ್ದರು. 31 ಜನರ ರಕ್ತ ಮತ್ತು ಮೂತ್ರದ ಮಾದರಿ ಸಂಗ್ರಹಿಸಿ ಎಫ್ಎಸ್ಎಲ್ಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಪಾರ್ಟಿಯಲ್ಲಿ ಭಾಗವಹಿಸಿದ ಕೆಲವರಲ್ಲಿ ಅಲ್ಪ ಪ್ರಮಾಣದ ಕೊಕೇನ್ ಸೇರಿದಂತೆ ಮಾದಕ ವಸ್ತುಗಳು ಸಿಕ್ಕಿದ್ದು, ಜಪ್ತಿ ಮಾಡಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.