ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಟ್ರಾಫಿಕ್ ಪೊಲೀಸರ ಎಡವಟ್ಟು- ಪ್ರಾಣ ಕಳೆದುಕೊಂಡ ಮೂರೂವರೆ ವರ್ಷದ ಮಗು
ಮಂಡ್ಯ:ಮೇ. 26: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ ಆಯಾ ತಪ್ಪಿ ಬಿದಿದ್ದಾರೆ. ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದೆ.
ಮಗುವನ್ನು ಮಡಿನಲ್ಲಿ ಇಟ್ಟುಕೊಂಡು ರಸ್ತೆಯಲ್ಲೇ ಪೋಷಕರು ಗೋಳಾಡಿದ್ದಾರೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡಿದ್ದಾರೆ. ಸಂಚಾರಿ ಪೊಲೀಸರ ವಿರುದ್ಧ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.