ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ಮಂಗಳೂರು: ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ತೋಡಿಗೆ ಮಗುಚಿ ಬಿದ್ದ ಕಾರು- ಫೋಟೊಗ್ರಾಫರ್ ಸೂರ್ಯ ನಾರಾಯಣ ನಿಧನ
ಮಂಗಳೂರು:ಮೇ.28,ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ.
ಸೂರ್ಯನಾರಾಯಣ ಅವರು ಪಣಂಬೂರು ಬಳಿಯ ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಫೋಟೊಗ್ರಾಫಿಗೆಂದು ತನ್ನ ಕಾರಲ್ಲಿ ಹೊರಟಿದ್ದರು. ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕೋಡಿಕಲ್ ಕ್ರಾಸ್ ಬಳಿ ತನ್ನ ಕಾರಿನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಬಿದ್ದು ಅಫಘಾತವಾಗಿದೆ. ಈ ಸಂಧರ್ಭದಲ್ಲಿ ಸ್ಥಳೀಯರು ಗಾಯಗೊಂಡ ಸೂರ್ಯ ನಾರಾಯಣ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಸೂರ್ಯನಾರಾಯಣ ಅವರು ಕಳೆದ ಹಲವು ವರ್ಷಗಳಿಂದ ಉಡುಪಿಯ ಕಿದಿಯೂರು ವರ್ಣ ಲ್ಯಾಬ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚಗಷ್ಟೇ ಅವರು ಕಾಸರಗೋಡು ಜಿಲ್ಲೆಯ ಉಪ್ಪಳ ಬಳಿ ಸ್ವಂತ ಫೋಟೊಗ್ರಾಫಿ ಸ್ಟೂಡಿಯೋ ಆರಂಭಿಸಿದ್ದರು. ಉಡುಪಿಯಲ್ಲಿ ಎಲ್ಲರೊಂದಿಗೂ ಅನೋನ್ಯವಾಗಿದ್ದ ಸೂರ್ಯನಾರಯಣ ಅವರು ಸೂರ್ಯ ಎಂದೇ ಕರೆಯಲ್ಪಡುತ್ತಿದ್ದರು.
ಇವರ ನಿಧನಕ್ಕೆ ಕರಾವಳಿಕಿರಣ ಡಾಟ್ ಕಾ೦ ಸ೦ತಾಪವನ್ನು ಸೂಚಿಸಿದೆ.