ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ಪಂಜಾಬ್: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಕಾರ್ಮಿಕರು ಸಾವು, 27 ಮಂದಿ ಗಾಯ

ಚಂಡೀಗಢ: ಪಂಜಾಬ್‌ನ ಶ್ರೀ ಮುಕ್ತ್ಸರ್ ಸಾಹಿಬ್‌ನಲ್ಲಿರುವ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸ್ಫೋಟದಲ್ಲಿ ಐವರು ವಲಸೆ ಕಾರ್ಮಿಕರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಶ್ರೀ ಮುಕ್ತ್ಸರ್ ಸಾಹಿಬ್ ಜಿಲ್ಲೆಯ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಲಂಬಿಯ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ಇದನ್ನು ದೃಢಪಡಿಸಿದ್ದಾರೆ.

ಸ್ಫೋಟದಲ್ಲಿ ಕನಿಷ್ಠ 25 ಜನರು ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದು ಬಿದ್ದಿದ್ದು, ಹಲವಾರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಪ್ರಯತ್ನಗಳು ಮುಂದುವರೆದಿದ್ದು, ಸ್ಥಳೀಯ ಅಧಿಕಾರಿಗಳು, ಅಗ್ನಿಶಾಮಕ ಸೇವೆಗಳು ಮತ್ತು ವಿಪತ್ತು ಪ್ರತಿಕ್ರಿಯೆ ತಂಡಗಳು ಸ್ಥಳದಲ್ಲಿದ್ದು ಬದುಕುಳಿದವರನ್ನು ಪತ್ತೆಹಚ್ಚಲು ಮತ್ತು ಹೊರತೆಗೆಯುವ ಕಾರ್ಯ ಮುಂದುವರಿದಿದೆ.

kiniudupi@rediffmail.com

No Comments

Leave A Comment