ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದಕ್ಷಿಣ ಕನ್ನಡದಿಂದ ಉನ್ನತ ಅಧಿಕಾರಿಗಳನ್ನು ಹೊರದಬ್ಬಿದ ಸರ್ಕಾರ: ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾದ ಪೊಲೀಸರ ಎತ್ತಂಗಡಿ!

ಮಂಗಳೂರು: ಸತತ ಕೊಲೆಗಳ ಬೆನ್ನಲ್ಲೇ, ರಾಜ್ಯ ಸರ್ಕಾರ ಗುರುವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆಗೊಳಿಸಿದೆ.

2010 ರ ಬ್ಯಾಚ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಮತ್ತು 2014 ರ ಬ್ಯಾಚ್ ಐಪಿಎಸ್ ಅಧಿಕಾರಿ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಎಸ್ಪಿಯಾಗಿ ನೇಮಿಸಲಾಗಿದೆ.

ದಕ್ಷಿಣ ಕನ್ನಡದ ಎಸ್ಪಿಯಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದ ರೆಡ್ಡಿ, ಕಠಿಣ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ. ಮಂಗಳೂರಿಗೆ ವರ್ಗಾವಣೆಯಾಗುವ ಮೊದಲು ಅವರು ಗುಪ್ತಚರ ಇಲಾಖೆಯ ಡಿಐಜಿಯಾಗಿದ್ದರು.

ಉಡುಪಿ ಎಸ್ಪಿಯಾಗಿದ್ದ ಅರುಣ್, ಅಲ್ಲಿ ಅಧಿಕಾರ ವಹಿಸಿಕೊಂಡ ನಂತರ ಪೊಲೀಸ್ ಪಡೆಯಲ್ಲಿ ಕೆಲವು ಸುಧಾರಣೆಗಳನ್ನು ತಂದಿದ್ದಾರೆ ಎಂದು ತಿಳಿದುಬಂದಿದೆ. ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಅನೇಕ ಪೊಲೀಸ್ ಸಿಬ್ಬಂದಿಯನ್ನು ಅವರು ವರ್ಗಾವಣೆ ಮಾಡಿದ್ದರು.

No Comments

Leave A Comment