ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಅಸ್ಸಾಂ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಸಂಸದ ಗೌರವ್ ಗೊಗೊಯ್ ಅಧಿಕಾರ ಸ್ವೀಕಾರ

ಗುವಾಹಟಿ: ಲೋಕಸಭಾ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಮತ್ತು ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅವರು ಪಕ್ಷವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.

ರಾಜ್ಯದ ಪ್ರಮುಖ ವಿರೋಧ ಪಕ್ಷವನ್ನು ಮೂರು ವರ್ಷಗಳಿಗೂ ಹೆಚ್ಚು ಕಾಲ ಮುನ್ನಡೆಸಿದ್ದ ನಿರ್ಗಮಿತ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಅವರು ನೂತನ ಅಧ್ಯಕ್ಷ ಗೌರವ್ ಗೊಗೊಯ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೊಗೊಯ್, ಪಕ್ಷವು ಸಮಾನತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಿದ್ಧಾಂತದಿಂದ ಪ್ರೇರಿತವಾಗಿ ಮುಂದುವರಿಯುತ್ತದೆ ಎಂದು ಹೇಳಿದರು.

“ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಅವರಿಂದ ಹಿಡಿದು ಹಿತೇಶ್ವರ್ ಸೈಕಿಯಾ ಮತ್ತು ತರುಣ್ ಗೊಗೊಯ್ ವರೆಗಿನ ನಾಯಕರ ಸಿದ್ಧಾಂತದಿಂದ ತಾವು ಪ್ರೇರಿತರಾಗಿದ್ದು, ನಾವು ಒಟ್ಟಾಗಿ ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯುತ್ತೇವೆ” ಎಂದು ತಿಳಿಸಿದರು.

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಗೌರವ್ ಗೊಗೊಯ್ ಅವರ ಬ್ರಿಟಿಷ್ ಪತ್ನಿ ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್‌ಐ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪಿಸಿ ವಾಗ್ದಾಳಿ ನಡೆಸುತ್ತಿದ್ದ ಸಮಯದಲ್ಲಿ, ಕಳೆದ ವಾರ ಪಕ್ಷದ ಕೇಂದ್ರ ನಾಯಕತ್ವವು ಗೊಗೊಯ್ ಅವರನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿತ್ತು.

No Comments

Leave A Comment