ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಇಂಟರ್ನೆಟ್ ಸೇವೆ ಸ್ಥಗಿತ, ಹಲವೆಡೆ ಕರ್ಫ್ಯೂ ಜಾರಿ

ಇಂಫಾಲ: ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಗಿದ್ದು, ಹಲವೆಡೆ ಕರ್ಫ್ಯೂ ಜಾರಿ ಮಾಡಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಬಂಧಿಸಿದ್ದು ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂದು ತಿಳಿದುಬಂದಿದೆ.

ಹಿಂಸಾಚಾರ ಹಿನ್ನೆಲೆಯಲ್ಲಿ ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್ ಮತ್ತು ಕಕ್ಚಿಂಗ್‌ನಂತಹ ಇತರ ಜಿಲ್ಲೆಗಳಲ್ಲಿಯೂ ಕರ್ಫ್ಯೂ ಜಾರಿ ಮಾಡಲಾಗಿದೆ, ಬಿಷ್ಣುಪುರ ಜಿಲ್ಲೆಯಲ್ಲೂ ಕರ್ಫ್ಯೂ ವಿಧಿಸಲಾಗಿದೆ.

ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಾಂಬೈ ಟೆಂಗೋಲ್‌ಗೆ ಸೇರಿದವರಾಗಿದ್ದರು. ಇವರು ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದು, ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಇದೇ ಗುಂಪು ಹಿಂದಿನ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಕುಕಿ ಗ್ರಾಮಗಳ ಮೇಲೆ ದಾಳಿ ಮಾಡಿದ ಆರೋಪವನ್ನು ಕೂಡ ಹೊಂದಿದೆ.

ಇದಿಗ ಇಂಫಾಲ ಪಶ್ಚಿಮ, ಇಂಫಾಲ ಪೂರ್ವ, ತೌಬಲ್ , ಬಿಷ್ಣುಪುರ ಮತ್ತು ಕಕ್ಚಿಂಗ್ ಜಿಲ್ಲೆಗಳಲ್ಲಿ ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಕೆಲವು ಸಮಾಜ ವಿರೋಧಿ ಶಕ್ತಿಗಳು ಸಾಮಾಜಿಕ ಮಾಧ್ಯಮವನ್ನು ವ್ಯಾಪಕವಾಗಿ ಬಳಸಿಕೊಂಡು, ದ್ವೇಷ ಭಾಷಣ ಮತ್ತು ದ್ವೇಷದ ವಿಡಿಯೊ ಸಂದೇಶಗಳನ್ನು ಪ್ರಸಾರ ಮಾಡಿ ಸಾರ್ವಜನಿಕರನ್ನು ಕೆರಳಿಸುವ ಶಂಕೆ ಇದೆ. ಇದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು. ಹಾಗಾಗಿ ಇಂಫಾಲ ಪೂರ್ವ, ಇಂಫಾಲ ಪಶ್ಚಿಮ, ತೌಬಲ್, ಕಕ್ಚಿಂಗ್ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಸದ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಟರ್‌ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಆಯುಕ್ತ ಎನ್. ಅಶೋಕ್ ಕುಮಾರ್ ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಸಿದ್ದಾರೆ.

No Comments

Leave A Comment