ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ಸಿಂಗಾಪುರ ಹಡಗಿನಲ್ಲಿ ಅಗ್ನಿ ಅವಘಡ: ಭಾರತೀಯ ನೌಕಾಪಡೆಯಿಂದ ರಕ್ಷಣೆ, ಗಾಯಾಳುಗಳು ಮಂಗಳೂರಿಗೆ ಶಿಫ್ಟ್​

ಮಂಗಳೂರು: ಜೂ.9: ಶ್ರೀಲಂಕಾದ ಕೊಲಂಬೊದಿಂದ ಮುಂಬೈಗೆ ಬರುತ್ತಿದ್ದ ಸಿಂಗಾಪುರದ ಕಂಟೈನರ್ ಹಡಗಿನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು, ಭಾರತೀಯ ನೌಕಾಪಡೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡವರನ್ನು ಚಿಕಿತ್ಸೆಗಾಗಿ ನೌಕಾಪಡೆಯ INS ಸೂರತ್ ಹಡಗಿನಲ್ಲಿ ಮಂಗಳೂರಿಗೆ ಕರೆತರಲಾಗುತ್ತಿದೆ. ಕೇರಳದ ಬೇಪೋರ್ ಕಡಲ ತೀರದಿಂದ 78 ನಾಟಿಕಲ್ ಮೈಲ್ಸ್ ದೂರದ ಆಳ ಸಮುದ್ರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಿಂಗಾಪುರದ MV ವಾನ್ ಹೈ 503 ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಹಡಗಿನಲ್ಲಿದ್ದ 22 ಮಂದಿ ಸಿಬ್ಬಂದಿಗಳ ಪೈಕಿ 18 ಜನ‌ ಸಿಬ್ಬಂದಿಯನ್ನು ಭಾರತೀಯ ನೌಕಾ ಪಡೆಯ ಭಾರತ್ ನೇವಿ ಶಿಪ್ INS ಸೂರತ್​ನ ಯೋಧರು ರಕ್ಷಿಸಿದ್ದಾರೆ. ಇನ್ನು, ಹಡಗಿನಲ್ಲಿದ್ದ ನಾಲ್ವರು ಸಿಬ್ಬಂದಿ ಕಣ್ಮರೆಯಾಗಿದ್ದಾರೆ. ಕಣ್ಮರೆಯಾದ ಸಿಬ್ಬಂದಿಗಳಿಗಾಗಿ ಇಂಡಿಯನ್ ಕೋಸ್ಟ್ ಗಾರ್ಡ್​ ರಾಜದೂತ್ ಶೋಧ ಕಾರ್ಯ ನಡೆಸುತ್ತಿದೆ. ಹಡಗಿನಲ್ಲಿ ಹೊತ್ತಿಕೊಂಡಿರುವ ಬೆಂಕಿಯನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಶಿಪ್ ICGS ಸಚೇತ್ ಮತ್ತು ICGS ಸಮುದ್ರ ಪ್ರೆಹರಿ ಜಂಟಿಯಾಗಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.

kiniudupi@rediffmail.com

No Comments

Leave A Comment