.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ ಸೇರಿ 13 ಜಿಲ್ಲೆಗಳಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಪೈಕಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಅಂತೆಯೇ ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮಧ್ಯರಾತ್ರಿ ಭಾರಿ ಮಳೆ
ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.
ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.
ಕರಾವಳಿ ಕರ್ನಾಟಕದಲ್ಲಿ ಜೂನ್ 12 ರಿಂದ 16ರ ವರೆಗೂ, ಉತ್ತರ ಕರ್ನಾಟಕದಲ್ಲಿ ಜೂನ್ 12 ರಿಂದ 15ರ ವರೆಗೂ ಮತ್ತು ದಕ್ಷಿಣ ಒಳನಾಡಿನಲ್ಲಿ ಜೂನ್ 15 ರಿಂದ 16ವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.