ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....
ಮಂಗಳೂರು: ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಆರೋಪ- ಮಾಜಿ ಶಾಸಕ ಮೊಯ್ದಿನ್ ಬಾವ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಜೂ. 11:ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 9 ರಂದು ರಾತ್ರಿ ಸುಮಾರು 8 ಗಂಟೆಗೆ ಮಾಜಿ ಶಾಸಕರಾದ ಮೊಯಿದ್ದೀನ್ ಬಾವಾ ಮತ್ತು ಅವರ ಇಬ್ಬರು ಸಹಚರರೊಂದಿಗೆ ಕಾಮಗಾರಿಯ ಬಿಲ್ಲನ್ನು ಮಂಜೂರು ಮಾಡುವ ವಿಷಯದ ಕುರಿತು ಎನ್.ಎಂ.ಪಿ.ಎ ಕಛೇರಿಯ ಡೆಪ್ಯೂಟಿ ಚೇರ್ಪರ್ಸನ್ ರವರ ಕಛೇರಿಗೆ ನುಗ್ಗಿ 15 ನಿಮಿಷ ಕಾಲ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವರನ್ನು ಕಛೇರಿಯಿಂದ ಹೊರಗೆ ಹೋಗಲು ಅವಕಾಶ ನೀಡದೇ ಅವರನ್ನು ತಡೆದು ನಿಲ್ಲಿಸಿದ್ದಾರೆ. ನಂತರ ಅವರು ಹೊರಗೆ ಬಂದಾಗಲೂ ಹಿಂಬಾಲಿಸುತ್ತಾ ಬೆದರಿಕೆ ಹಾಕಿ ಕಿರಿಚುತ್ತಾ ಬಂದಿದ್ದು, ಕಾರಿನಲ್ಲಿ ಬೇರೆ ಕರ್ತವ್ಯಕ್ಕೆ ಹೋಗುತ್ತಿರುವಾಗ ಕಾರನ್ನು ಸಹ ತಡೆದು ನಿಲ್ಲಿಸಿ ವಾಗ್ವಾದ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 60/2025 ಕಲಂ 224,221,132, 126, 127, 226 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.