ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ರಾಜಸ್ಥಾನ: ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವು
ಜೈಪುರ: ರಾಜಸ್ಥಾನದ ಟೊಂಕ್ ಜಿಲ್ಲೆಯ ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವನ್ನಪ್ಪಿದ ದಾರುಣ ಘಟನೆ ಮಂಗಳವಾರ ನಡೆದಿದೆ.
ಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ.
25 ರಿಂದ 30 ವರ್ಷ ವಯಸ್ಸಿನ 11 ಯುವಕರ ಗುಂಪು ಸ್ನಾನ ಮಾಡಲು ನದಿಗೆ ಇಳಿದಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ 8 ಯುವಕರು ಸಾವನ್ನಪ್ಪಿದ್ದಾರೆ ಎಂದು ವಿಕಾಸ್ ಸಾಂಗ್ವಾನ್ ಅವರು ತಿಳಿಸಿದ್ದಾರೆ.
ಅವರು ಆಳವಾದ ನೀರಿಗೆ ಹೇಗೆ ಜಾರಿದರು ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಮೃತರು ಪಿಕ್ನಿಕ್‌ಗಾಗಿ ಜೈಪುರದಿಂದ ಬಂದಿದ್ದರು ಎಂದು ಅವರು ಹೇಳಿದ್ದಾರೆ.