ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಕಾರ್ಕಳ: ನಂದಿಕೂರಿನಲ್ಲಿ ಬಸ್-ಆಟೋ ಡಿಕ್ಕಿ; ಓರ್ವ ಸಾವು, ನಾಲ್ವರಿಗೆ ಗಾಯ

ಕಾರ್ಕಳ:ಜೂ.12,ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ.

ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿದ ಕಾರಣ ದೊಡ್ಡ ದುರಂತ ತಪ್ಪಿದಂತಾಗಿದೆ.

ಆಟೋರಿಕ್ಷಾದಲ್ಲಿ ಉತ್ತರ ಭಾರತದ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣವೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಿದೆ.

kiniudupi@rediffmail.com

No Comments

Leave A Comment