ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ನಮ್ಮ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಕೇಂದ್ರದ ಜಾತಿ ಗಣತಿಗಿಂತ ಭಿನ್ನ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ನಮ್ಮ ಸರ್ಕಾರದ ಮುಂಬರುವ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆಯು ಕೇಂದ್ರದ ಜಾತಿ ಗಣತಿಗಿಂತ ಸಂಪೂರ್ಣ ಭಿನ್ನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ರಾಜ್ಯದ ಈ ಉಪಕ್ರಮವು ಸಾಮಾಜಿಕ ನ್ಯಾಯ ಒದಗಿಸುತ್ತದೆ ಎಂದು ಒತ್ತಿ ಹೇಳಿದ್ದಾರೆ.

ಕೇಂದ್ರ ಸರ್ಕಾರ 16ನೇ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಮಾರ್ಚ್ 1, 2027 ರಿಂದ ಆರಂಭಿಸುವುದಾಗಿ ಅಧಿಸೂಚನೆ ಹೊರಡಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರ ಸರ್ಕಾರ ಜನಗಣತಿಯನ್ನು 2027 ರಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ ಎಂದು ಹೇಳಿದರು.

ಕೇಂದ್ರದ ಜನಗಣತಿಗೆ ಕರ್ನಾಟಕ ಸರ್ಕಾರದಿಂದ ಯಾವುದೇ ಆಕ್ಷೇಪಣೆ ಇಲ್ಲ ಎಂದು ಪುನರುಚ್ಚರಿಸಿದ ಸಿಎಂ, ರಾಜ್ಯದ ಸಮೀಕ್ಷೆಯ ವ್ಯಾಪ್ತಿ ಮತ್ತು ಉದ್ದೇಶವನ್ನು ಒತ್ತಿ ಹೇಳಿದರು.

kiniudupi@rediffmail.com

No Comments

Leave A Comment