ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಕಾಲುವೆಯಲ್ಲಿ ಹರಿಯಾಣದ ಮಾಡೆಲ್ ಶೀತಲ್ ಶವವಾಗಿ ಪತ್ತೆ
ಚಂಡೀಗಢ:ಜೂ. 16.ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರಿಯಾಣ ಮೂಲದ ಮಾಡೆಲ್ ಶೀತಲ್ ಶವ ಪತ್ತೆಯಾಗಿದೆ.
ಹರಿಯಾಣದ ಸಂಗೀತ ಉದ್ಯಮದಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜೂನ್ 14 ರಂದು ಶೀತಲ್ ಶೂಟಿಂಗ್‌ಗಾಗಿ ಅಹರ್ ಗ್ರಾಮಕ್ಕೆ ತೆರಳಿದ್ದರು. ಬಳಿಕ ಅವರು ಮರಳಿ ಮನೆಗೆ ಬಾರದೇ ಇದ್ದಾಗ ಸಹೋದರಿ ನೇಹಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಖಾಂಡಾ ಗ್ರಾಮದ ಬಳಿಯ ಕಾಲುವೆಯಲ್ಲಿ ಶೀತಲ್ ಅವರ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಶೀತಲ್ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.