ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಅಹಮದಾಬಾದ್ ವಿಮಾನ ದುರಂತ: 87 ಶವಗಳ ಗುರುತು ಪತ್ತೆ; 47 ಮೃತದೇಹ ಹಸ್ತಾಂತರ
ಅಹಮದಾಬಾದ್:ಜೂ.16, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದವರ ಪೈಕಿ ಡಿಎನ್‌ಎ ಹೊಂದಾಣಿಕೆ ಮೂಲಕ 87 ಮಂದಿಯ ಗುರುತು ಪತ್ತೆ ಮಾಡಲಾಗಿದೆ. 47 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದುರಂತ ನಡೆದ ನಾಲ್ಕು ದಿನಗಳ ನಂತರ 87 ಸಂತ್ರಸ್ತರನ್ನು ಗುರುತಿಸಲಾಗಿದೆ. ಈವರೆಗೆ ಗುರುತು ಪತ್ತೆ ಮಾಡಲಾದ ಸಂತ್ರಸ್ತರು ರಾಜಸ್ಥಾನ ಮತ್ತು ಗುಜರಾತ್‌ನ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತದೇಹಗಳ ಗುರುತು ಪತ್ತೆ ಹಚ್ಚುವುದು ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಸವಾಲಿನ ಕೆಲಸವಾಗಿದೆ. ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸಂಪೂರ್ಣ ಸುಟ್ಟು ಕರಕಲಾಗಿವೆ. ಮತ್ತು ರುಂಡ-ಮುಂಡ, ಕೈ-ಕಾಲುಗಳು ಬೇರೆ ಬೇರೆಯಾಗಿ ಛಿದ್ರವಾಗಿದೆ. ಆದ್ದರಿಂದ ಡಿಎನ್‌ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ. ಮೃತಪಟ್ಟವರ ಸಂಬಂಧಿಕರು ಸಿವಿಲ್ ಆಸ್ಪತ್ರೆಗೆ ಬಂದು ತಮ್ಮ ಡಿಎನ್‌ಎ ನಮೂನೆಗಳನ್ನು ನೀಡಿ ಆಸ್ಪತ್ರೆಯ ಆವರಣದಲ್ಲಿ ನಾಲ್ಕು ದಿನದಿಂದ ಕಾಯುತ್ತಿದ್ದಾರೆ.