.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........
ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಹುಸಿ ಬಾಂಬ್ ಬೆದರಿಕೆ: ಪೊಲೀಸರಿಂದ ಪರಿಶೀಲನೆ
ಉಡುಪಿ: ಉಡುಪಿ ನಗರದ ಬೈಲಕೆರೆಯಲ್ಲಿರುವ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಇಂದು ಹುಸಿ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಶಾಲೆಯಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಇ-ಮೇಲ್ ಸ್ವೀಕೃತವಾಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸರು ಇಡಿ ಶಾಲೆಯನ್ನು ಸುಪರ್ದಿಗೆ ಪಡೆದು ವಿಧ್ವಂಸಕ ವಿರೋಧಿ ತಂಡ, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಯಿತು.
ಆದರೆ ಈ ವೇಳೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಕಂಡು ಬಂದಿಲ್ಲ. ಆದುದರಿಂದ ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದುದರಿಂದ ಇದೀಗ ದುದರಿಂದ ಇದೀಗ ಶಾಲೆಯನ್ನು ಪರಿಶೀಲಿಸಿ, ಪೊಲೀಸರು ಆಡಳಿತ ಮಂಡಳಿಗೆ ಬಿಟ್ಟುಕೊಟ್ಟಿದ್ದಾರೆಂದು ತಿಳಿದು ಬಂದಿದೆ.