ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
‘ನಮ್ಮ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕ್‌ನಿಂದ ಇಸ್ರೇಲ್ ಮೇಲೆ ಪರಮಾಣು ದಾಳಿ’- ಇರಾನ್ ಎಚ್ಚರಿಕೆ
ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಈ ಹೇಳಿಕೆಯನ್ನು ಇಸ್ಲಾಮಾಬಾದ್ ತಕ್ಷಣವೇ ತಿರಸ್ಕರಿಸಿದೆ ಎಂದು ಹೇಳಲಾಗಿದೆ.
ಇರಾನ್ ಮತ್ತು ಇಸ್ರೇಲ್ ನಡುವೆ ಕ್ಷಿಪಣಿಗಳ ದಾಳಿ ನಡೆದಿದ್ದು, ಈ ವೇಳೆ ಇರಾನ್ ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ ಜನರಲ್ ಮೊಹ್ಸೆನ್ ರೆಝಾಯ್ ಅವರು, ‘ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದರೆ ನಾವು ಇಸ್ರೇಲ್ ಮೇಲೆ ಪರಮಾಣು ಬಾಂಬ್ ದಾಳಿ ಮಾಡುವುದಾಗಿ ಪಾಕಿಸ್ತಾನ ನಮಗೆ ಭರವಸೆ ನೀಡಿದೆ’ ಎಂದು ಹೇಳಿಕೆ ನೀಡಿದ್ದಾರೆ.
ಆಪರೇಷನ್ ‘ರೈಸಿಂಗ್ ಲಯನ್’ ಬಳಿಕ ಇಸ್ರೇಲ್-ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 3 ದಿನಗಳಿಂದ ಎರಡೂ ರಾಷ್ಟ್ರಗಳು ಮಿಸೈಲ್‌ಗಳ ಸುರಿಮಳೆಯನ್ನೇ ಸುರಿಸಿವೆ. ಇರಾನ್ ಮಿಸೈಲ್ ದಾಳಿಗೆ ಇಸ್ರೇಲ್ ಕೂಡ ಮಿಸೈಲ್‌ಗಳ ಮೂಲಕವೇ ಉತ್ತರಿಸಿದೆ. ಎರಡೂ ದೇಶಗಳಲ್ಲಿ ಸುಮಾರು 248 ಮಂದಿ ಸಾವನ್ನಪ್ಪಿರುವುದಾಗಿ (ಇರಾನ್- 230 ಮತ್ತು ಇಸ್ರೇಲ್ -18) ವರದಿಯಾಗಿವೆ.