.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

‘ನಮ್ಮ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕ್‌ನಿಂದ ಇಸ್ರೇಲ್ ಮೇಲೆ ಪರಮಾಣು ದಾಳಿ’- ಇರಾನ್ ಎಚ್ಚರಿಕೆ

ಟೆಹ್ರಾನ್:ಜೂ. 16. ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಹಾಕಿದರೆ ಪಾಕಿಸ್ತಾನವು ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನ್‌ನ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯಹೂದಿ ರಾಷ್ಟ್ರವಾದ ಇಸ್ರೇಲ್ ಇರಾನ್ ಮೇಲೆ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಿದರೆ ಪಾಕಿಸ್ತಾನ ಇಸ್ರೇಲ್ ಮೇಲೆ ಪರಮಾಣು ದಾಳಿ ನಡೆಸುತ್ತದೆ ಎಂದು ಇರಾನಿನ ಹಿರಿಯ ಅಧಿಕಾರಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಈ ಹೇಳಿಕೆಯನ್ನು ಇಸ್ಲಾಮಾಬಾದ್ ತಕ್ಷಣವೇ ತಿರಸ್ಕರಿಸಿದೆ ಎಂದು ಹೇಳಲಾಗಿದೆ.

ಇರಾನ್ ಮತ್ತು ಇಸ್ರೇಲ್ ನಡುವೆ ಕ್ಷಿಪಣಿಗಳ ದಾಳಿ ನಡೆದಿದ್ದು, ಈ ವೇಳೆ ಇರಾನ್ ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ ಜನರಲ್ ಮೊಹ್ಸೆನ್ ರೆಝಾಯ್ ಅವರು, ‘ಇಸ್ರೇಲ್ ಇರಾನ್ ಮೇಲೆ ಪರಮಾಣು ಬಾಂಬ್ ಬಳಸಿದರೆ ನಾವು ಇಸ್ರೇಲ್ ಮೇಲೆ ಪರಮಾಣು ಬಾಂಬ್ ದಾಳಿ ಮಾಡುವುದಾಗಿ ಪಾಕಿಸ್ತಾನ ನಮಗೆ ಭರವಸೆ ನೀಡಿದೆ’ ಎಂದು ಹೇಳಿಕೆ ನೀಡಿದ್ದಾರೆ.

ಆಪರೇಷನ್ ‘ರೈಸಿಂಗ್ ಲಯನ್’ ಬಳಿಕ ಇಸ್ರೇಲ್-ಇರಾನ್ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಳೆದ 3 ದಿನಗಳಿಂದ ಎರಡೂ ರಾಷ್ಟ್ರಗಳು ಮಿಸೈಲ್‌ಗಳ ಸುರಿಮಳೆಯನ್ನೇ ಸುರಿಸಿವೆ. ಇರಾನ್ ಮಿಸೈಲ್ ದಾಳಿಗೆ ಇಸ್ರೇಲ್ ಕೂಡ ಮಿಸೈಲ್‌ಗಳ ಮೂಲಕವೇ ಉತ್ತರಿಸಿದೆ. ಎರಡೂ ದೇಶಗಳಲ್ಲಿ ಸುಮಾರು 248 ಮಂದಿ ಸಾವನ್ನಪ್ಪಿರುವುದಾಗಿ (ಇರಾನ್- 230 ಮತ್ತು ಇಸ್ರೇಲ್ -18) ವರದಿಯಾಗಿವೆ.

No Comments

Leave A Comment