ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಭಾತರದ ಪ್ರಧಾನಿ ಮೋದಿಯವರಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ ಮಾಡಲಾಯಿತು.
ಸೈಪ್ರಸ್ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಪ್ರಧಾನಿ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ನೀಡಿ ಗೌರವಿಸಿದರು.
“ಸೈಪ್ರಸ್‌ನ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III’ ಅನ್ನು ನಮ್ರತೆ ಮತ್ತು ಕೃತಜ್ಞತೆಯಿಂದ ಸ್ವೀಕರಿಸುತ್ತೇನೆ. ನಾನು ಇದನ್ನು ಭಾರತ ಮತ್ತು ಸೈಪ್ರಸ್ ನಡುವಿನ ಸ್ನೇಹಕ್ಕೆ ಅರ್ಪಿಸುತ್ತೇನೆ” ಎಂದು ಪ್ರಶಸ್ತಿ ಸ್ವೀಕರಿಸಿದ ನಂತರ ಪ್ರಧಾನಿ ಮೋದಿ ಹೇಳಿದ್ದಾರೆ.
ಆರ್ಡರ್ ಆಫ್ ಮಕರಿಯೋಸ್ III ಸೈಪ್ರಸ್‌ನ ಮೊದಲ ಅಧ್ಯಕ್ಷ ಆರ್ಚ್‌ಬಿಷಪ್ ಮಕರಿಯೋಸ್ III ಅವರ ಹೆಸರಿನಲ್ಲಿ ನೀಡುವ ಅತ್ಯುನ್ನತ ನಾಗರಿಕ ಗೌರವವಾಗಿದೆ.