ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಏರ್ ಇಂಡಿಯಾ ಸಹ-ಪೈಲಟ್‌ ಕ್ಲೈವ್ ಕುಂದರ್ ಗೆ ಅಂತ್ಯಕ್ರಿಯೆ – ಕುಟುಂಬದಿಂದ ಅಂತಿಮ ವಿದಾಯ

ನವದೆಹಲಿ:ಜೂ. 19. ಕಳೆದ ವಾರ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರ ಬೆಳಿಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹ-ಪೈಲಟ್ ಮೃತದೇಹವನ್ನು ಹೊತ್ತ ಶವಪೆಟ್ಟಿಗೆಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿಸಿ, ಗೋರೆಗಾಂವ್ (ಪಶ್ಚಿಮ) ದ ರಾಮ ಮಂದಿರ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ತರಲಾಯಿತು.

ಕ್ಲೈವ್ ಕುಂದರ್ ತಮ್ಮ ವೃದ್ಧ ಪೋಷಕರು ಮತ್ತು ತಂಗಿಯೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದರು. ಪಾರ್ಥಿವ ಶರೀರವನ್ನು ಕ್ಲೈವ್ ಕುಂದರ್ ಅವರ ಮನೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ನಂತರ, ಸೆವ್ರಿ ಕ್ರಿಶ್ಚಿಯನ್ ಸ್ಮಶಾನದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎನ್ನಲಾಗಿದೆ. ಅಂತಿಮ ನಮನ ಸಲ್ಲಿಸಲು ಸಹಸ್ರಾರು ಸಂಖ್ಯೆಯ ಜನಸಮೂಹವೇ ಸೇರಿತ್ತು. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿತ್ತು.

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರಕಾರ, ಕ್ಲೈವ್ ಕುಂದರ್ 1,100 ಗಂಟೆಗಳ ಹಾರಾಟ ನಡೆಸಿದ್ದಾರೆ. ಕಳೆದ ವಾರ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು, 12 ಸಿಬ್ಬಂದಿ ಸೇರಿದಂತೆ 242 ಜನರಲ್ಲಿ 241 ಜನರು ಸಾವನ್ನಪ್ಪಿದ್ದರು.

No Comments

Leave A Comment