ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಜಗನ್ನಾಥ ರಥಯಾತ್ರೆ ವೇಳೆ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿ ಓಡಿದ ಆನೆ: ಹಲವರಿಗೆ ಗಾಯ; Video ವೈರಲ್
ಅಹ್ಮದಾಬಾದ್: ಅಹಮದಾಬಾದ್ನಲ್ಲಿ ನಡೆದ 148ನೇ ಜಗನ್ನಾಥ ರಥಯಾತ್ರೆ ಮೆರವಣಿಗೆ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ್ದು, ಈ ವೇಳೆ ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ. ಈ ವೇಳೆ ಮಾವುತರೂ ಕೂಡ ಆನೆ ಹಿಂದೆ ಓಡಿದ್ದು, ಆನೆಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಆದರೆ, ನಿಯಂತ್ರಣಕ್ಕೆ ಸಿಕ್ಕಿಲ್ಲ. ಬಳಿಕ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರದೇಶವನ್ನು ತೆರವುಗೊಳಿಸಿದ್ದಾರೆ. ಹೀಗಾಗಿ. ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಬಳಿಕ ವೈದ್ಯರು ಮತ್ತು ಅರಣ್ಯ ಇಲಾಖೆಯ ಸಹಾಯದಿಂದ ಆನೆಯನ್ನು ನಿಯಂತ್ರಣಕ್ಕೆ ತರಲಾಗಿದೆ. ಆನೆಯ ಓಡಾಟದಿಂದ ಉಂಟಾದ ಕಾಲ್ತುಳಿತದಲ್ಲಿ ಸಿಲುಕಿಕೊಳ್ಳದೆ ಕೆಲವರು ಅದೃಷ್ಟವಶಾತ್ ತಪ್ಪಿಸಿಕೊಂಡಿದ್ದಾರೆ.
ಅಹಮದಾಬಾದ್ ನಗರದ ಪ್ರಸಿದ್ಧ ರಥೋತ್ಸವದಲ್ಲಿ, ಆನೆಗಳು ಯಾವಾಗಲೂ ಆಕರ್ಷಣೆಯ ಕೇಂದ್ರ ಬಿಂದುವಾಗಿರುತ್ತವೆ. ಈ ಬಾರಿ ರಥೋತ್ಸವಕ್ಕಾಗಿ ಒಟ್ಟು 16 ಆನೆಗಳು ಆಗಮಿಸಿದ್ದವು. ಅದರಲ್ಲಿ ಒಂದು ಗಂಡು ಆನೆ ಮಾನಸಿಕ ಅಸಮತೋಲನದಿಂದಾಗಿ ಇದ್ದಕ್ಕಿದ್ದಂತೆ ಓಡಲು ಪ್ರಾರಂಭಿಸಿದೆ. ಇದು ಸುತ್ತಮುತ್ತಲಿನ ಜನಸಮೂಹದಲ್ಲಿ ಭಯಭೀತತೆಯನ್ನು ಉಂಟುಮಾಡಿದೆ. ಸದ್ಯ ಭಯಭೀತಗೊಂಡಿದ್ದ ಆನೆ ಅರಣ್ಯ ಇಲಾಖೆ ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿದೆ ಎಂದು ತಿಳಿದುಬಂದಿದೆ.