ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉತ್ತರಕಾಶಿಯಲ್ಲಿ ಮೇಘಸ್ಫೋಟ: 9 ಕಾರ್ಮಿಕರು ನಾಪತ್ತೆ, ಕೊಚ್ಚಿಹೋಗಿರುವ ಶಂಕೆ
ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಒಂಬತ್ತು ರಸ್ತೆ ನಿರ್ಮಾಣ ಕಾರ್ಮಿಕರು ಕೊಚ್ಚಿಹೋಗಿರುವ ಶಂಕೆಯಿದೆ.
ಉತ್ತರಕಾಶಿ ಜಿಲ್ಲೆಯ ಯಮುನೋತ್ರಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಬಾರ್ಕೋಟ್ ಪ್ರದೇಶದ ಸಿಲೈ ಬೆಂಡ್ ಬಳಿ ಭಾರೀ ಮಳೆ ಮತ್ತು ಮೇಘಸ್ಫೋಟದ ಪರಿಣಾಮವಾಗಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ಉತ್ತರಕಾಶಿಯ ವಿಪತ್ತು ನಿಯಂತ್ರಣ ಕೊಠಡಿ ತಿಳಿಸಿದೆ.
ಯಮುನೋತ್ರಿ ಹೆದ್ದಾರಿಯಲ್ಲಿ ಮೇಘಸ್ಫೋಟದ ಬಗ್ಗೆ ಮಧ್ಯರಾತ್ರಿಯ ಸುಮಾರಿಗೆ ಮಾಹಿತಿ ಬಂದಿದೆ ಎಂದು ಬಾರ್ಕೋಟ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೀಪಕ್ ಕಥೈತ್ ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ತಂಡವು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಅಲ್ಲಿ ಡೇರೆಗಳನ್ನು ಹಾಕಿಕೊಂಡು ವಾಸಿಸುತ್ತಿದ್ದರು. ಅವರು ಭಾರೀ ಮಳೆಗೆ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿಯವರೆಗೆ ಎಂಟರಿಂದ ಒಂಬತ್ತು ಜನರು ಕಾಣೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕಾರ್ಮಿಕರೆಲ್ಲರೂ ನೇಪಾಳಿ ಮೂಲದವರಾಗಿದ್ದು, ಹುಡುಕಾಟ ನಡೆಯುತ್ತಿದೆ. ಮೇಘಸ್ಫೋಟದ ನಂತರ ಸಿಲೈ ಬೆಂಡ್ ಸೇರಿದಂತೆ ಹಲವು ಸ್ಥಳಗಳಲ್ಲಿ ಹೆದ್ದಾರಿಯನ್ನು ಮುಚ್ಚಲಾಗಿದೆ.