ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬ್ರಹ್ಮಾವರ: ದನದ ತಲೆ ಬುರುಡೆ ಪತ್ತೆ ಪ್ರಕರಣ: ಆರು ಮಂದಿ ಆರೋಪಿಗಳ ಬಂಧನ
ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು.
ರಾಮ(49), ಪ್ರಸಾದ್(21), ನವೀನ್(35), ಕೇಶವ ನಾಯ್ಕ್(50), ಸಂದೇಶ(35), ರಾಜೇಶ್ (28) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಇವರೆಲ್ಲರೂ ಕುಂಜಾಲು ಗ್ರಾಮದ ನಿವಾಸಿಗಳಾಗಿದ್ದಾರೆ. ಇವರು ದನವನ್ನು ಖರೀದಿಸಿ ಮಾಂಸ ಮಾಡಿ ಅದರ ಕಳೆಬರವನ್ನು ವಿಲೇವಾರಿ ಮಾಡಲು ಸ್ಕೂಟರಿನಲ್ಲಿ ಸಾಗಿಸುತ್ತಿದ್ದು ಈ ವೇಳೆ ದನದ ತಲೆ ಬುರುಡೆ ಹಾಗೂ ಇತರ ಭಾಗಗಳು ರಸ್ತೆಗೆ ಬಿದ್ದಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.