.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಮಂಗಳೂರು: ಅಡವಿಟ್ಟ 6.5ಕೆ.ಜಿ ಚಿನ್ನವನ್ನೇ ಎಗರಿಸಿ 3.5 ಕೋಟಿ ಸಾಲ ಪಡೆದ ಸಹಕಾರ ಸಂಘದ ಮ್ಯಾನೇಜರ್‌!

ಮಂಗಳೂರು:ಜು. 01,ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ  ಮ್ಯಾನೇಜರ್‌ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಗ್ರಾಹಕರು ತಮ್ಮ ಕಷ್ಟಕ್ಕೆ ಅಡವಿಟ್ಟಿದ್ದ 6.5 ಕೆಜಿ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂಬ ಆಘಾತಕಾರಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ಅದೇ ಚಿನ್ನವನ್ನು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು 3.5 ಕೋಟಿ ರೂ. ಸಾಲ ಪಡೆದಿದ್ದಾರೆ.ಮಂಗಳೂರಿನ ಶಕ್ತಿನಗರದ ಪದುವಾ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಘಟನೆ ನಡೆದಿದೆ., ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಆರೋಪಿ ಸಹಕಾರಿ ಸಂಘದ ವ್ಯವಸ್ಥಾಪಕ ಪ್ರೀತೇಶ್ ಎಂದು ಗುರುತಿಸಲಾಗಿದೆ. ವಂಚನೆ ಚಟುವಟಿಕೆಯಲ್ಲಿ ಸಹಾಯ ಮಾಡಿದ ಶೇಖ್ ಮೊಹಮ್ಮದ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಆರೋಪಿಯು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಸೊಸೈಟಿಯ ಲಾಕರ್‌ನಿಂದ ಅಕ್ರಮವಾಗಿ ಅಡವಿಟ್ಟ ಚಿನ್ನವನ್ನು ಹೊರತೆಗೆದಿದ್ದಾನೆ. ನಂತರ ತನ್ನ ಸಹಚರರ ಮೂಲಕ ಅದೇ ಆಭರಣಗಳನ್ನು ಶಕ್ತಿನಗರದ ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು 3.25 ಕೋಟಿ ರೂ. ಸಾಲ ಪಡೆದಿದ್ದಾನೆ.

ವಂಚನೆಯ ಸುದ್ದಿ ಗೊತ್ತಾಗುತ್ತಿದ್ದಂತೆ , ಪ್ರೀತೇಶ್ ಬೆಂಗಳೂರಿಗೆ ಪರಾರಿಯಾಗಿ ನಂತರ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬಳಿಕ ಪೊಲೀಸರು ಬಂಧನಕ್ಕಾಗಿ ಲುಕೌಟ್ ನೋಟಿಸ್‌ ಜಾರಿ ಮಾಡಿದ್ದರು. ಇದೀಗ ಪ್ರಮುಖ ಆರೋಪಿ ಪ್ರೀತೇಶ್ ವಿದೇಶದಿಂದ ಬಂದು ಮಂಗಳೂರಿನ ಕೋರ್ಟಿಗೆ ಶರಣಾಗಿದ್ದಾನೆ ಎಂಬ ಮಾಹಿತಿ ದೊರಕಿದ್ದು, ಆತನನ್ನು ಜೈಲಿಗೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ನಿಜವಾದ ಆಭರಣಗಳನ್ನು ಬಳಸಿ 3.5 ಕೋಟಿ ರೂ. ಸಾಲ ಪಡೆದ ನಂತರ, ಪ್ರೀತೇಶ್ ಮೂಲ ಗ್ರಾಹಕರನ್ನು ವಂಚಿಸಲು ಯೋಜನೆ ರೂಪಿಸಿದ್ದ ಎನ್ನಲಾಗಿದೆ. ಚಿನ್ನವನ್ನು ಒಂದೇ ವಿನ್ಯಾಸದ ನಕಲಿ ಆಭರಣಗಳಿಂದ ಬದಲಾಯಿಸುವ ಮೂಲಕ ಈ ಯೋಜನೆ ರೂಪಿಸಿದ್ದ. ಈ ಉದ್ದೇಶಕ್ಕಾಗಿ ಸುಮಾರು 3.5 ಕೆಜಿ ರೋಲ್ಡ್ ಗೋಲ್ಡ್ ಆಭರಣಗಳನ್ನು ತಯಾರಿಸಲಾಗಿತ್ತು. ಈ ನಕಲಿ ವಸ್ತುಗಳನ್ನು ಶೇಖ್ ಮೊಹಮ್ಮದ್ ಅವರಿಂದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

No Comments

Leave A Comment