ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾಗೆ 6 ತಿಂಗಳು ಜೈಲು ಶಿಕ್ಷೆ

ಢಾಕಾ: ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬುಧವಾರ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ(ಐಸಿಟಿ)ಯು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಐಸಿಟಿ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಈ ತೀರ್ಪು ನೀಡಿದೆ ಎಂದು ಢಾಕಾ ಟ್ರಿಬ್ಯೂನ್ ಪತ್ರಿಕೆ ವರದಿ ತಿಳಿಸಿದೆ.

ಇದೇ ತೀರ್ಪಿನಲ್ಲಿ, ಗೈಬಂಧದ ಗೋಬಿಂದಗಂಜ್‌ನ ಶಕಿಲ್ ಅಕಂದ್ ಬುಲ್ಬುಲ್‌ಗೆ ನ್ಯಾಯಮಂಡಳಿ ಎರಡು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ಶೇಖ್ ಹಸೀನಾ ಅವರು 11 ತಿಂಗಳ ಹಿಂದೆ ಅಧಿಕಾರ ತೊರೆದು ದೇಶದಿಂದ ಪಲಾಯನ ಮಾಡಿದ ನಂತರ ಮೊದಲ ಬಾರಿ ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

No Comments

Leave A Comment