ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ನೂತನ ಜಿಲ್ಲಾಧಿಕಾರಿಗಳ ಭೇಟಿ
ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.