ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...

ಚಿನ್ನ ಕಳ್ಳಸಾಗಣೆ ಪ್ರಕರಣ: EDಯಿಂದ ರನ್ಯಾ ರಾವ್‌ಗೆ ಸೇರಿದ 34 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಸುಮಾರು 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರಿಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ(ED) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಅಂತಾರಾಷ್ಟ್ರೀಯ ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರನ್ಯಾಗೆ ಸೇರಿದ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿರುವ ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಲೇಔಟ್ ನಲ್ಲಿರುವ ಮನೆ, ಅರ್ಕಾವತಿ ಲೇಔಟ್ ನಲ್ಲಿರುವ ನಿವೇಶನ, ತುಮಕೂರಿನಲ್ಲಿರುವ ಕೈಗಾರಿಕಾ ನಿವೇಶನ, ಆನೇಕಲ್ ತಾಲೂಕಿನಲ್ಲಿರುವ ಕೃಷಿ ಜಮೀನನ್ನು ಜಪ್ತಿ ಮಾಡಲಾಗಿದೆ.

ಕಳೆದ ಮಾರ್ಚ್​ 3ರ ರಾತ್ರಿ ದುಬೈನಿಂದ ಎಮಿರೇಟ್ಸ್ ಏರ್‌ಲೈನ್ಸ್ ವಿಮಾನದಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ)ದ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದು, ಈ ವೇಳೆ ನಟಿ ಬಳಿ 14.80 ಕೆಜಿ ಚಿನ್ನ ಪತ್ತೆಯಾಗಿತ್ತು. ತಕ್ಷಣ ನಟಿಯನ್ನು ಬಂಧಿಸಲಾಗಿತ್ತು.

ರನ್ಯಾ ರಾವ್ ಮತ್ತು ಅವರ ಸಹಚರರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಜಾಮೀನು ನೀಡಲಾಗಿದ್ದರೂ, ರನ್ಯಾ ರಾವ್ ಮತ್ತು ಅವರ ಇಬ್ಬರು ಸಹಚರರಾದ ತರುಣ್ ಕೊಡೂರು ರಾಜು ಹಾಗೂ ಸಾಹಿಲ್ ಸಕರಿಯಾ ಜೈನ್ ಅವರನ್ನು ಕಠಿಣ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ 1974(COFEPOSA ಕಾಯ್ದೆ, 1974) ಅಡಿಯಲ್ಲಿ ಬಂಧಿಸಿರುವುದರಿಂದ ನಟಿಯನ್ನು ಜೈಲಿನಿಂದ ಬಿಡುಗಡೆ ಮಾಡಿಲ್ಲ.

kiniudupi@rediffmail.com

No Comments

Leave A Comment